ನವದೆಹಲಿ: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 2024ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಬಿಡೆನ್ ಅವರನ್ನು ಸೆಪ್ಟೆಂಬರ್‌ನಲ್ಲಿ ಆಹ್ವಾನಿಸಿದ್ದಾರೆ ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ತಿಳಿಸಿದ್ದಾರೆ.
ಆದರೆ, ಬಿಡೆನ್ ಅವರು ಭಾರತದ ಆಹ್ವಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರತ್ಯೇಕವಾಗಿ 2024 ರ ನಂತರ ಕ್ವಾಡ್ ಶೃಂಗಸಭೆಯನ್ನು ಭಾರತದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
"ಪ್ರಸ್ತುತ ಪರಿಗಣನೆಯಲ್ಲಿರುವ ದಿನಾಂಕಗಳು ಅಧ್ಯಕ್ಷ ಜೋ ಬಿಡನ್ ಅವರ ಭಾರತದ ಭೇಟಿಗೆ ಹೋಲಿಕೆಯಾಗುತ್ತಿಲ್ಲ. ಹೀಗಾಗಿ ನಾವು ಪರಿಷ್ಕೃತ ದಿನಾಂಕಗಳನ್ನು ಹುಡುಕುತ್ತಿದ್ದೇವೆ ಎಂದು ಅಧಿಕೃತ ಮೂಲಗಳು ತಿಲಳಿಸಿವೆ. ಹೀಗಾಗಿ ಅವರು ಗಣರಾಜ್ಯೋತ್ಸವಕ್ಕೆ ಆಗಮಿಸಲೂ ಬಹುದು ಎಂದು ಮೂಲಗಳು ತಿಳಿಸಿವೆ.