ಸಾಗರದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಬಸ್‌ಗೆ ಬೆಂಕಿ ತಗುಲಿರುವುದು. 
ನ್ಯೂಸ್

ಜೋಗ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ

ಸಾಗರ: ಇಲ್ಲಿನ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಮಂಗಳವಾರ ಇದ್ದಕ್ಕಿದ್ದಂತೆ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ ತಗುಲಿದೆ. ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ವಾಯವ್ಯ ಕರ್ನಾಟಕ ಸಾರಿಗೆ ಬಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಬಸ್‌ನಿಂದ ಇಳಿದು ಪ್ರಯಾಣಿಕರನ್ನು ಪಾರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್‌ನಲ್ಲಿ 12 ಪ್ರಯಾಣಿಕರಿದ್ದರು. ಯಾರಿಗೂ ಅಪಾಯವಾಗಿಲ್ಲ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಕಾಲಮಿತಿಯೊಳಗೆ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಬೆಂಕಿಯಿಂದ ಶೇ.50ರಷ್ಟು ಬಸ್ ಸುಟ್ಟುಹೋಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣಾ ಇಲಾಖೆಯಿಂದ ಅವರಿಗೆ ಸಾಂತ್ವನ ಹೇಳಲಾಯಿತು.