ನ್ಯೂಸ್

ನ್ಯಾಯಾಂಗ ಬಂಧನ ಅವಧಿ ಮತ್ತೊಂದು ದಿನ ವಿಸ್ತರಣೆ

ಮಂಜುನಾಥ.ಕೆ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ಮತ್ತೊಂದು ದಿನ ವಿಸ್ತರಣೆಯಾಗಿದೆ.
ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಗುರುವಾರ ೨೪ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಆರೋಪಿಗಳ ಪರ ವಕೀಲರ ಅಬ್ಜೆಕ್ಷನ್ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ಶುಕ್ರವಾರಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ. ಇದೇ ವೇಳೆ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರು ಹೇಳಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಆರೋಪಿ ಪರ ವಕೀಲರು ಮನವಿ ಮಾಡಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಲು ಒಂದು ವಾರ ಸಮಯ ಬೇಕಾಗುತ್ತೆ ಎಂದು ಎಸ್‌ಪಿಪಿ ವಾದಿಸಿದರು.