ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕೆ (ಕೆಸೆಟ್- 24)ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.