kabali producer got arrested 
ನ್ಯೂಸ್

'ಕಬಾಲಿ' ಚಿತ್ರದ ನಿರ್ಮಾಪಕನ ಬಂಧನ!; ಕಾರಣವೇನು? ಇಲ್ಲಿದೆ ಮಾಹಿತಿ

ಮೋಹನ್​ ಶೆಟ್ಟಿ

ತೆಲಂಗಾಣ: ಡ್ರಗ್ಸ್ ದಂಧೆ ನಡೆಸುತ್ತಿದ್ದ 'ಕಬಾಲಿ' ಚಿತ್ರದ ನಿರ್ಮಾಪಕ ಕೆ.ಪಿ. ಚೌಧರಿಯನ್ನು ತೆಲಂಗಾಣದ ಸೈಬರಾಬಾದ್ ಪೊಲೀಸರು ಇಂದು ಬಂಧಿಸಿದ್ದಾರೆ.

ಸುಮಾರು 78.5 ಲಕ್ಷ ರೂ. ಮೌಲ್ಯದ ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದಡಿ ಚೌಧರಿಯನ್ನು ಪೊಲೀಸರು ಬಂಧಿಸಿದ್ದು, ಆತನ ಬಳಿಯಿದ್ದ 82.75 ಗ್ರಾಂ ಕೊಕೇನ್ ಇರುವ 90 ಪ್ಯಾಕೆಟ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಸುಂಕರ ಕೃಷ್ಣ ಪ್ರಸಾದ್ ಚೌಧರಿ ತೆಲಂಗಾಣದ ಖಮ್ಮಂ ಜಿಲ್ಲೆಯ ಬೋನಕಲ್ ಮಂಡಲ್ ಮೂಲದವನಾಗಿದ್ದು, ಗೋವಾದಲ್ಲಿ ಕ್ಲಬ್ ಸ್ಥಾಪಿಸಿ ಆಗಾಗ್ಗೆ ಬಂದು ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಪ್ರಕರಣವನ್ನು ಸೈಬರಾಬಾದ್ ಪೊಲೀಸರು ದಾಖಲಿಸಿಕೊಂಡಿದ್ದು, ಆರೋಪಿ ಕೃಷ್ಣ ಪ್ರಸಾದ್ ಚೌಧರಿ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ,(ಏಜೆನ್ಸೀಸ್).