ನ್ಯೂಸ್

ಕಬಿನಿ ಜಲಾಶಯ ಭರ್ತಿಗೆ 3 ಅಡಿ ಮಾತ್ರ ಬಾಕಿ

ಮೈಸೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಹಾಗೂ ಕಬಿನಿ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದ ಜಲಾಶಯ ಭರ್ತಿಯ ಹಂತಕ್ಕೆ ತಲುಪಿದ್ದು, ಭರ್ತಿಗೆ ಕೇವಲ 3 ಅಡಿ ಮಾತ್ರ ಬಾಕಿ ಇದೆ.

ಗರಿಷ್ಠ 2284 ಅಡಿಗಳಷ್ಟು ನೀರಿನ ಸಂಗ್ರಹಣ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 2281.32 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 2256.69 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 5509 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 4,000 ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ.