ನ್ಯೂಸ್

ಮಾಜಿ ಸ್ಪೀಕರ್​ ಕಾಗೋಡು ತಿಮ್ಮಪ್ಪ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸ್ಪೀಕರ್​ ಕಾಗೋಡು ತಿಮ್ಮಪ್ಪನವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ತಿಮ್ಮಪ್ಪನವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್​-19 ತಪಾಸಣೆಗೆ ಒಳಗಾಗಿದ್ದ ಅವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಇದೀಗ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆಯೂ ಕೂಡ ತಿಮ್ಮಪ್ಪನವರು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಸೇರಿದ್ದರು.