ಬೆಂಗಳೂರು: ಇಂದು ಕಾಗೋಡು ತಿಮ್ಮಪ್ಪ ಪುತ್ರಿ ಬಿಜೆಪಿ ಸೇರ್ಪಡೆ ಆಗಿದ್ದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಈಗಾಗಲೇ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪರನ್ನು ಕಡೆಗಣಿಸಲಾಗುತ್ತಿದೆ ಎನ್ನಲಾಗುತ್ತಿದೆ.
ಇದರಿಂದಾಗಿ ಕಾಗೋಡು ತಿಮ್ಮಪ್ಪ ಬಿಜೆಪಿಗೆ ಹತ್ತಿರವಾಗಲಿದ್ದಾರಾ ಎನ್ನುವ ಪ್ರಶ್ನೆಯೂ ಎದ್ದಿದೆ. ಇಂದು ಕಾಗೋಡು ಪುತ್ರಿ ರಾಜನಂದಿನಿಯನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮ ನಡೆದಿದ್ದು ಮಾಜಿ ಸಿಎಂ ಯಡಿಯೂರಪ್ಪ , ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.
ಬಿಜೆಪಿ ಕಚೇರಿಯಲ್ಲಿ ಗೋಡ್ ತಿಮ್ಮಪ್ಪ ಪುತ್ರಿ ರಾಜ ನಂದಿನಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು ಅವರನ್ನು ಪಕ್ಷದ ಬಾವುಟ ನೀಡಿ ಪಕ್ಷ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ಇನ್ನು ರಾಜನಂದಿನಿ ಬಿಎಸ್ವೈರನ್ನು ಭೇಟಿ ಮಾಡಿರುವ ಫೋಟೊ ಕೂಡ ಎಲ್ಲೆಡೆ ಹರಿದಾಡುತ್ತಿದ್ದು ಅವರ ಬಿಜೆಪಿ ಸೇರ್ಪಡೆ ಹಿಂದೆ ಹರತಾಳ ಹಾಲಪ್ಪ ಕೆಲಸ ಇದೆ ಎನ್ನಲಾಗುತ್ತಿದೆ.