ನ್ಯೂಸ್

ನಿಂತಿದ್ದ ಲಾರಿಗೆ ಮಿನಿ ಬಸ್ ಗುದ್ದಿದ ರಭಸಕ್ಕೆ ಐವರು ಸಾವು, 11 ಜನರಿಗೆ ಗಾಯ... Kalaburagi Accident

ಕಲಬುರಗಿ: ( Kalaburagi Accident  )ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ದುರ್ಮರಣ  ಹೊಂದಿದ್ದಾರೆ.

ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಮಿನಿ ಬಸ್​​ನಲ್ಲಿದ್ದ  ಒಟ್ಟು 31 ಜನರ ಪೈಕಿ ಐವರು ಸಾವನ್ನಪ್ಪಿದ್ದಾರೆ. 11 ಜನರಿಗೆ ಗಾಯಗಳಾಗಿವೆ.

ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.