ನ್ಯೂಸ್

ಚಾಕುವಿನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಪುತ್ರನ ಬರ್ಬರ ಹತ್ಯೆ

ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ ಆಪ್ತರೂ ಆಗಿರುವ ಕಾಂಗ್ರೆಸ್‌ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಹತ್ಯೆ ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಕೊಲೆ ನಡೆದಿದೆ.

ಚಂದ್ರಶೇಖರ್ ಚೌಲ್ (21) ಕೊಲೆಯಾದ ದುರ್ದೈವಿ.  ಚಾಕುವಿನಿಂದ ಚುಚ್ಚಿ ಬರ್ಬರ ಹತ್ಯೆ  ಮಾಡಲಾಗಿದೆ.  ಆಳಂದ  ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಘಟನೆ ನಡೆದಿ. ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ಕಾರಣ ಸದ್ಯ ನಿಗೂಢವಾಗಿದೆ. ಆಳಂದ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.