ಬೆಂಗಳೂರು: ಅಳಿವಿನಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕಲಾಸಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಮುತ್ತು ಹಮೀದ್ ಮೀರಾ ಎಂಬಾತ ಬಂಧಿತ ಆರೋಪಿ. ಕಲಾಸಿಪಾಳ್ಯ ಎವಿ ರಸ್ತೆಯ ನ್ಯಾಷನಲ್ ಟ್ರಾವೆಲ್ ಬಳಿ ಎರಡು ಬ್ಯಾಗ್‌ಗಳಲ್ಲಿ ಆರೋಪಿ 401 ನಕ್ಷತ್ರ ಆಮೆಗಳೊಂದಿಗೆ ನಿಂತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ದಾಳಿ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೊಡ್ಡ ಸಂಖ್ಯೆಯ ಆಮೆಗಳನ್ನು ಆರೋಪಿಗಳಿಗೆ ಕೊಟ್ಟವರಾರು..? ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.