ನ್ಯೂಸ್

ಕಂಬಳದ 'ರನ್​ ವೀರ' ಶ್ರೀನಿವಾಸ ಗೌಡ ಇಂದು ವಿಧಾನಸೌಧಕ್ಕೆ; ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಸನ್ಮಾನ

ಮಂಗಳೂರು: ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ವಿಶ್ವದ ಅತ್ಯಂತ ವೇಗದ ಓಟಗಾರ ಎನಿಸಿಕೊಂಡಿರುವ ಉಸಾನ್​ ಬೋಲ್ಟ್​ರನ್ನೂ ಹಿಂದಿಕ್ಕಿದ್ದ ಶ್ರೀನಿವಾಸ್​ ಗೌಡ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಆಹ್ವಾನದ ಮೇರೆಗೆ ಇಂದು ಮಧ್ಯಾಹ್ನ ಸುಮಾರು 2ಗಂಟೆ ಹೊತ್ತಿಗೆ ವಿಧಾನಸೌಧಕ್ಕೆ ಬರಲಿದ್ದಾರೆ.

ಶ್ರೀನಿವಾಸ ಗೌಡ ಅವರು ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ್​ ಕಡಂಬ ಮತ್ತು ವಾರ್ತಾ ಇಲಾಖೆ ಸಿಬ್ಬಂದಿಯೊಂದಿಗೆ ಆಗಮಿಸಲಿದ್ದಾರೆ.

ಶ್ರೀನಿವಾಸ ಗೌಡ ಅವರಿಗೆ ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಲಿದ್ದಾರೆ.

ಕಂಬಳವೀರ ಶ್ರೀನಿವಾಸ ಗೌಡ ಅವರು ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಅವರ ಗಮನ ಸೆಳೆದಿದ್ದಾರೆ. ಶ್ರೀನಿವಾಸ್ ಗೌಡ ಅವರನ್ನು ಒಲಿಂಪಿಕ್ಸ್​ಗೆ ಕಳಿಸುವ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.(ದಿಗ್ವಿಜಯ ನ್ಯೂಸ್​)