ಚೇಳಾಯರು ಶ್ರೀ ಉಳ್ಳಾಯ ಇಷ್ಟದೇವತೆ ಬಬ್ಬರ್ಯ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಿತು. 
ನ್ಯೂಸ್

ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನ ನೇಮೋತ್ಸವ

ಪ್ರಮುಖ ಮುಖ್ಯಾಂಶಗಳು

  • ನಂದಿಗೋಣ, ಕುಮಾರ ಸಿರಿಗಳ ಭೇಟಿ
  • ನಾಗದೇವರಿಗೆ ತಂಬಿಲ ಸೇವೆ
ಹಳೆಯಂಗಡಿ: ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದಲ್ಲಿ ಕಂಡೇವುದ ಆಯನದ ಅಂಗವಾಗಿ ದೈವಗಳ ನೇಮೋತ್ಸವ ನಡೆಯಿತು. ಶನಿವಾರ ಬೆಳಗ್ಗೆ 5 ಗಂಟೆಗೆ ಧರ್ಮರಸು ಶ್ರೀ ಉಳ್ಳಾಯ ಇಷ್ಟದೇವತೆ ಬಬ್ಬರ್ಯ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಾಗೂ ಪ್ರಸಾದ ವಿತರಣೆ ನಡೆಯಿತು. ಬಳಿಕ ನಂದಿಗೋಣ, ಕುಮಾರ ಸಿರಿಗಳ ಭೇಟಿ, ನಾಗದೇವರಿಗೆ ತಂಬಿಲ ಸೇವೆ ನಡೆಯಿತು.
ನಾಗರಾಜ್ ಭಟ್ ಭಟ್ರಚಾವಡಿ, ರಂಗನಾಥ ಭಟ್, ದೈವಸ್ಥಾನ ಗೌರವಾಧ್ಯಕ್ಷ ತೋಕೂರುಗುತ್ತು ಉದಯಕುಮಾರ್ ಶೆಟ್ಟಿ ಅಧ್ಯಕ್ಷ ಖಂಡಿಗೆಬೀಡು ದಯಾನಂದ ಬಿ.ಶೆಟ್ಟಿ, ಕಾರ್ಯದರ್ಶಿ ಚರಣ್‌ಕುಮಾರ್, ಕೋಶಾಧಿಕಾರಿ ಸುಧಾಕರ ಪಿ.ಶೆಟ್ಟಿ, ಆಡಳಿತ ಸಮಿತಿ ಮತ್ತು ಪದಾಧಿಕಾರಿಗಳು, ಸರ್ವ ಸದಸ್ಯರು ಗುತ್ತು ಮನೆತನದವರು ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

ಸಂಜೆ ಬಾಕಿಮಾರು ಗದ್ದೆಯಲ್ಲಿ ಚೆಂಡು, ಜಾರಂದಾಯ, ಬಂಟ, ಕೊಡಮಣಿತ್ತಾಯ ದೈವಗಳಿಗೆ ಜೋಡಿ ನೇಮೋತ್ಸವ, ಬಾಕಿಲ್ ದಾಂತಿ ಕೋರ್ದಬ್ಬು ದೈವಸ್ಥಾನದ ಶ್ರೀ ಕೋರ್ದಬ್ಬು ಮತ್ತು ಧೂಮಾವತಿ ದೈವದ ಭೇಟಿ, ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳಿಗೆ ಸಾಮೂಹಿಕ ಹೂವಿನ ಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಧ್ವಜಾವರೋಹಣ, ಖಂಡಿಗೆ ಬೀಡಿಗೆ ಭಂಡಾರ ನಿರ್ಗಮನ ಕಾರ್ಯಕ್ರಮ ನಡೆಯಿತು.