ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಬಾರದು ಎಂದು ಆಗ್ರಹಿಸಿ, ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಮತ್ತು ಒಕ್ಕೂಟಗಳು ರಾಜ್ಯಾವ್ಯಾಪಿ ಬಂದ್ ಮಾಡುವ ಮೂಲಕ ತೀವ್ರ ಪ್ರತಿಭಟನೆ ನಡೆಸುತ್ತಿದೆ.
ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿರುವ ಕರವೇ ಕಾರ್ಯಕರ್ತರು, ಇದೀಗ ಬೆಂಗಳೂರು ಏರ್ಪೋರ್ಟ್ಗೆ ಮುತ್ತಿಗೆ ಹಾಕಿ, ಕಾವೇರಿ ನೀರು ಬಿಡದಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕನ್ನಡದ ಬಾವುಟಗಳನ್ನು ಕೈಯಲ್ಲಿಡಿದು ಕರವೇ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಕರವೇ ಕಾರ್ಯಕರ್ತರನ್ನು ತಡೆಯುವಲ್ಲಿ ಹರಸಾಹಸ ಪಡುತ್ತಿರುವ ಪೊಲೀಸರು, ಸದ್ಯ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸದ್ಯ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.