ನ್ಯೂಸ್

ಸೆಂಟ್ರಲ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳು; ಕರ್ನಾಟಕದಲ್ಲಿ 110 ಪೋಸ್ಟ್ ಭರ್ತಿ

ಬೆಂಗಳೂರು: ಬ್ಯಾಂಕಿಂಗ್ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಿರಾ? ಬ್ಯಾಂಕ್‌ನಲ್ಲಿ ಉದ್ಯೋಗ ಮಾಡುವ ಇಚ್ಛೆ ಇದೆಯೇ? ಹಾಗಾದರೆ, ಇಲ್ಲೊಂದು ಸುವರ್ಣಾವಕಾಶವಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಹಾಗೂ ಆಸಕ್ತ ಉದ್ಯೋಗಾಕಾಂಕ್ಷಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಸಿಬಿಐ ಸಾರ್ವಜನಿಕ ಬ್ಯಾಂಕ್ ಆಗಿದ್ದು, 1911 ಡಿ.21ರಂದು ಸ್ಥಾಪಿಸಲಾಯಿತು. ಮುಂಬೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಬಿಐ ಭಾರತೀಯ ರಿಸರ್ವ್ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಒಟ್ಟು ಹುದ್ದೆಗಳು-3000

ಹುದ್ದೆಯ ವಿವರ
ಅಪ್ರೆಂಟಿಸ್ - 3000

ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 2021 ಮಾ.31ರ ನಂತರ ಉತ್ತೀರ್ಣರಾಗಿದ್ದು, ಪದವಿ ಪ್ರಮಾಣಪತ್ರ ಪಡೆದಿರಬೇಕು.

ವೇತನ
ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15,000 ರೂ. ಸ್ಟೈಪೆಂಡ್ ಪಾವತಿಸಲಾಗುತ್ತದೆ.

ವಯೋಮಿತಿ
1996 ಏ.1 ರಿಂದ 2004 ಮಾ.31ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಬಿಸಿ ಅಭ್ಯರ್ಥಿಗಳಿಗೆ 3ವರ್ಷ, ಎಸ್‌ಸಿ-ಎಸ್‌ಟಿಗಳಿಗೆ 5ವರ್ಷ ಹಾಗೂ ಅಂಗವಿಕಲರಿಗೆ 10ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸುವ ವಿಧಾನ
*ಸೆಂಟ್ರಲ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
* ಮುಖಪುಟದಲ್ಲಿ ಕಾಣುವ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ.
* ಮುಂದಿನ ಪುಟದಲ್ಲಿ ತೆರೆಯುವ ಅಪ್ಲಿಕೇಶನ್‌ನಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ, ಸ್ವಯಂ ದೃಢೀಕೃತ ದಾಖಲೆಗಳನ್ನು ಸ್ಕಾೃನ್ ಮಾಡಿ ಅಪ್‌ಲೋಡ್ ಮಾಡಬೇಕು.
* ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಿದ ನಂತರ ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.
* ಮುಂದಿನ ಪ್ರಕ್ರಿಯೆ ಉದ್ದೇಶದಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಳ್ಳಬಹುದು.

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 800 ರೂ. ಅರ್ಜಿ ಶುಲ್ಕ ನಿಗದಿಪಡಿಸಿದ್ದು, ಎಸ್‌ಸಿ-ಎಸ್‌ಟಿ ಮತ್ತು ಎಲ್ಲ ಮಹಿಳಾ ಅಭ್ಯರ್ಥಿಗಳು 600 ರೂ. ಹಾಗೂ ಅಂಗವಿಕಲ ಅಭ್ಯರ್ಥಿಗಳು 400 ರೂ. ಅರ್ಜಿಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ
ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೇ ದಿನ: 06-03-2024
ತಾತ್ಕಾಲಿಕ ಆನ್‌ಲೈನ್ ಪರೀಕ್ಷೆ: 10-03-2024

ಹೆಚ್ಚಿನ ಮಾಹಿತಿಗಾಗಿ:centralbankofindia.co.in