ಜಿಲ್ಲಾಧಿಕಾರಿ ಗುರುದತ್ತ ಹೆಗಡೆ 
ನ್ಯೂಸ್

ಅ.11ರಂದು ಜಿಲ್ಲೆಗೆ ಕನ್ನಡ ಜ್ಯೋತಿ ರಥಯಾತ್ರೆ

ಶಿವಮೊಗ್ಗ: ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಅಭಿಯಾನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆಗೊಂಡ ಕನ್ನಡ ಜ್ಯೋತಿ ರಥಯಾತ್ರೆಯು ಅ.11ರಂದು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸಲಿದೆ.

ಮೈಸೂರು ರಾಜ್ಯವು ಕರ್ನಾಟಕವೆಂದು ಮರು ನಾಮಕರಣವಾಗಿ 2023ರ ನ.1ಕ್ಕೆ 50 ವರ್ಷ ಪೂರ್ಣಗೊಂಡ ಶುಭ ಸಂದರ್ಭಕ್ಕೆ ಸಿಎಂ, ಕಳೆದ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಸಂಭ್ರಮ-50 ಘೋಷಿಸಿದ್ದರು. ಅದರಡಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಅದರ ಅಂಗವಾಗಿ ಕನ್ನಡ ಜ್ಯೋತಿ ರಥೆಯಾತ್ರೆ ಜಿಲ್ಲೆಗೆ ಆಗಮಿಸಲಿದೆ. ರಥಯಾತ್ರೆಯನ್ನು ಜಾನಪದ ಕಲಾತಂಡಗಳೊಂದಿಗೆ ಸ್ವಾಗತಿಸಿ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು, ಸ್ತ್ರೀಶಕ್ತಿ ಸಂಘಟನೆಗಳು ಭಾಗವಹಿಸಿ ಬೀಳ್ಕೊಡಲಾಗುವುದು. 11ರಂದು ಹೊಸನಗರ, 13ರಂದು ತೀರ್ಥಹಳ್ಳಿ, 14ರಂದು ಭದ್ರಾವತಿ, 15ರಂದು ಶಿವಮೊಗ್ಗ, 16ರಂದು ಶಿಕಾರಿಪುರ, 17ರಂದು ಸೊರಬ ಮತ್ತು 18ರಂದು ಸಾಗರ ತಾಲೂಕುಗಳಲ್ಲಿ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.