Karnataka bandh : ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ನಡೆಯುವುದು ಖಚಿತ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು (ಮಾ.18) ಪುನರುಚ್ಛರಿಸಿದರು.
ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಎಲ್ಲ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ಮುಂದಾಗಿವೆ. ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದು, ಮಾರ್ಚ್ 22ರಂದು ಕನ್ನಡಪರ ಸಂಘಟನೆಗಳು ಹೋರಾಟ ನಡೆಸಲಿದ್ದು, ಅಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ನಡೆಯಲಿದೆ.
ಇತ್ತೀಚೆಗೆ ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದವು. ಅಲ್ಲದೆ, ಮರಾಠಿ ಪುಂಡರು ಕರ್ನಾಟಕದ ಬಸ್ಗಳಿಗೆ ಹಾಗೂ ಕಂಡಕ್ಟರ್ ಮತ್ತು ಡ್ರೈವರ್ಗಳಿಗೆ ಮಸಿ ಬಳಿಯುತ್ತಿದ್ದು, ಪುಂಡರ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳುವಂತೆ ಮತ್ತು ಇನ್ನು ಮುಂದೆ ಇಂತಹ ಘಟನೆಗಳು ಮರುಕುಳಿಸದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಏರಲು ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.