ಬೆಂಗಳೂರು: ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪ್ರಕಟಣೆಗಳು ಶೇ. 50 ರಿಯಾಯಿತಿ ದರಗಳಲ್ಲಿ ಮಾರಾಟವಾಗಲಿವೆ.
ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ ಹಾಗೂ ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ದೊರೆಯಲಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ ಡಿಡಿಡಿ.ಚ್ಞ್ಞಟ್ಠಠಿಟ್ಟಜಿಚ್ಟ.್ಚಟಞ (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿಯೂ ಶೇ.50 ರಿಯಾಯಿತಿ ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಸೇರಿ ಹಲವು ಪ್ರಕಾರಗಳಲ್ಲಿ ಪುಸ್ತಕಗಳು ಲಭ್ಯವಿದೆ. ಇದುವರೆಗೂ 704 ಶೀರ್ಷಿಕೆಗಳಲ್ಲಿ ಸಾಹಿತ್ಯ ಕೃತಿಗಳನ್ನು ಮುದ್ರಿಸಿ ಪ್ರಕಟಿಸಿದೆ. ಪುಸ್ತಕಪ್ರಿಯರು ಈ ರಿಯಾಯಿತಿ ಅವಕಾಶ ಬಳಸಿಕೊಳ್ಳಬಹುದಾಗಿದೆ. ವಿವರಗಳಿಗೆ ದೂ: 080-2210 7705 ಸಂಪರ್ಕಿಸಿ.