Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ವೇಳೆ, ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ.
ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ.
ಸಿನಿಮಾ ತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ರಿಷಬ್ ಶೆಟ್ಟಿ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.