ಜನಿವಾರ ತೆಗೆಸಿದ ಅಧಿಕಾರಿಗಳ ಕ್ರಮ ಖಂಡಿಸಿ ಕರವೇ (ಪ್ರವೀಣ್ ಶೆಟ್ಟಿ ಬಣ)ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮುರುಳಿ, ಸುರೇಶ್ ಇದ್ದರು. 
ನ್ಯೂಸ್

ಡಿಸಿ ಕಚೇರಿ ಎದುರು ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಶಿವಮೊಗ್ಗ: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದನ್ನು ಖಂಡಿಸಿ ಕರವೇ (ಪ್ರವೀಣ್ ಶೆಟ್ಟಿ ಬಣ)ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು. ಸಾಂಪ್ರದಾಯಿಕ ಉಡುಗೆ ಪಂಚೆ, ಶಲ್ಯ ತೊಟ್ಟು ಬಂದ ಕರವೇ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ಜನಿವಾರ ತೆಗೆಸುವ ಮೂಲಕ ಹಿಂದು ಭಾವನೆಗಳಿಗೆ ಅನ್ಯಾಯವಾಗಿದೆ. ಸರ್ಕಾರ ತಕ್ಷಣ ಸರಿಪಡಿಸಿಕೊಂಡು ಶಿವಮೊಗ್ಗ ಮತ್ತು ಬೀದರ್‌ನ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ಕರವೇ ಪ್ರಮುಖರಾದ ಮುರುಳಿ, ಸುರೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.