ನ್ಯೂಸ್

ಕರವೇಯಿಂದ ಚಿಂತನ ಮಂಥನ ಸಮಾವೇಶ ಸೆ. 10ರಂದು

ರಾಣೆಬೆನ್ನೂರ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಸೆ. 10ರಂದು ಬೆಳಗ್ಗೆ 11.30ಕ್ಕೆ ಇಲ್ಲಿಯ ಮೃತ್ಯುಂಜಯ ಸಭಾಭವನದಲ್ಲಿ ರಾಜ್ಯ ಕಾರ್ಯಕಾರಣಿ ಚಿಂತನ ಮಂಥನ ಸಮಾವೇಶ ಏರ್ಪಡಿಸಲಾಗಿದೆ ಎಂದು ಸಂಘಟನೆಯ ತಾಲೂಕು ಅಧ್ಯಕ್ಷ ಪರಮೇಶ್ವರಯ್ಯ ಮಠದ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹಿರೇಮಠದ ಶಿವಯೋಗಿ ಶಿಚಾಚಾರ್ಯರು, ಬಂಕಾಪುರ ಅರಳೆಲೆಮಠದ ರುದ್ರಮುನಿ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಸಂಘಟನೆಯ ಅಧ್ಯಕ್ಷ ಪಿ. ಕೃಷ್ಣೇಗೌಡ ಉದ್ಘಾಟಿಸುವರು. ಜಿಲ್ಲಾಧ್ಯಕ್ಷ ಪರಶುರಾಮ ರಿತ್ತಿ ಅಧ್ಯಕ್ಷತೆ ವಹಿಸುವರು.
ಶಾಸಕ ಪ್ರಕಾಶ ಕೋಳಿವಾಡ ಮೆರವಣಿಗೆಗೆ ಚಾಲನೆ ನೀಡುವರು. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಜ್ಯೋತಿ ಬೆಳಗಿಸುವರು. ಸಂಘಟನೆಯ ಉತ್ತರ ಕರ್ನಾಟಕದ ಕಾರ್ಯಾಧ್ಯಕ್ಷ ನಾಗರಾಜ ಮಡಿವಾಳರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವರು. ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ. ಬಣಕಾರ, ಶ್ರೀನಿವಾಸ ಮಾನೆ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.