ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು (ಮೇ 21) ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಪ್ರಕಟಿಸಿದ್ದು, ಫಲಿತಾಂಶವನ್ನು ಮಂಡಳಿಯ ವೆಬ್‌ಸೈಟ್ http//karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.
ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆಸಲಾಗಿತ್ತು. 1,49,824 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 52,505 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಶೇ. 35 ರಷ್ಟು ಫಲಿತಾಂಶ ಬಂದಿದೆ.
ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆ - 1 ಮತ್ತು ಪರೀಕ್ಷೆ - 2 ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseah.karnataka.gov.in ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.
ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು:
ಉತ್ತರ ಪತ್ರಿಕೆಯ ಮರುಮೌಲ್ಯಮಾಪನ:
* ಯಾವುದೇ ಅಭ್ಯರ್ಥಿಗಳು ಪರೀಕ್ಷೆ -3 ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.
* ಯಾವುದೇ ಸಂದರ್ಭದಲ್ಲಿ, "ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್ ಎಲ್ ಪಿ ಇ 1997, 29 (ಎ)" ಪ್ರಕಾರ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರುಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-2ರ ಅಂಕಗಳೆಂದು ಪರಿಗಣಿಸಲಾಗುವುದು.
* ಮರುಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿಲ್ಲ.
* ಮರು ಮೌಲ್ಯಮಾಪನದ ಮತ್ತು ಮರುಎಣಿಕೆಯ ಫಲಿತಾಂಶವನ್ನು ಮಂಡಳಿಯ https://kseeb.karnataka.gov.in ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.