ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆಸಲಾಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಅಥವಾ ಇತರ ಅಗತ್ಯ ಲಾಗಿನ್ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಆದ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.
Result | ಕರ್ನಾಟಕ ಪದವಿ ಪೂರ್ವ-ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆಯು 2025ರ ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12.30ಕ್ಕೆ ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ:08/04/2025 ರಂದು ಮಧ್ಯಾಹ್ನ 12:30 ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.