ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ವಿವಿಧ ಕನ್ನಡ ಪರ ಸಂಘಟನೆಗಳು ಇದೀಗ ಶುಕ್ರವಾರ (ಸೆ.29) ರಾಜ್ಯವ್ಯಾಪಿ ಬಂದ್ ಅನ್ನು ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳಿಗೆ ಮುಂದಾಗಿದೆ.
ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023: ಇತಿಹಾಸ ಸೃಷ್ಟಿಸಿದ ರೋಶಿಬಿನಾ ದೇವಿ, ವುಶುನಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಭಾರತೀಯ ಅಥ್ಲೀಟ್
ಕಾವೇರಿ ನೀರಿಗಾಗಿ ನಾಳೆ ಅಖಂಡ ಕರ್ನಾಟಕ ಬಂದ್ ಮಾಡಲಿರುವ ಕನ್ನಡ ಪರ ಸಂಘಟನೆಗಳು ಮತ್ತು ಒಕ್ಕೂಟದ ಮುಖಂಡರು, ನಗರ ಪ್ರದೇಶಗಳಲ್ಲಿ ಬೃಹತ್ ಮೆರವಣಿಗೆ ಮಾಡುವ ಮುಖೇನ ಬಂದ್ಗೆ ಬೆಂಬಲ ಕೊಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.
ಇಂದು ನಗರದ ಹಲವು ಪ್ರದೇಶಗಳಲ್ಲಿ ತೆರೆದ ವಾಹನದಲ್ಲಿ ಸಾರ್ವಜನಿಕರ ಬೆಂಬಲ ಕೋರುತ್ತಿರುವ ಒಕ್ಕೂಟದ ಮುಖಂಡರು, ಅಧ್ಯಕ್ಷ ವಾಟಳ್ ನಾಗರಾಜ್ ನೇತೃತ್ವದಲ್ಲಿ ಬಂದ್ ಜಾಗೃತಿ ಮೂಡಿಸುತ್ತಿದ್ದಾರೆ.