ನವದೆಹಲಿ: ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಹಾಗೂ ತೆರವಾಗಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಟಿಕೆಟ್ ನೀಡಿದೆ.
ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಬಸವಕಲ್ಯಾಣದ ಯುವ ಬಿಜೆಪಿ ನಾಯಕ ಶರಣು ಸಲಗರ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ನಿರೀಕ್ಷೆಯಂತೆ ಮಸ್ಕಿ ವಿಧಾನಸಭೆ ಉಪ ಚುನಾವಣೆಗೆ ಪ್ರತಾಪ್ ಗೌಡ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಸುಮಾರು 1 ಡಜನ್ಗೂ ಹೆಚ್ಚಿದ್ದರು. ಆದರೂ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ.