ಬೆಂಗಳೂರು: ಕಳೆದ ಬಾರಿ ಕಳೆಗುಂದಿದ್ದ ಮತದಾನಕ್ಕೆ ಈ ಬಾರಿ ಹೊಸ ಕಳೆ ಬಂದಂತಿದೆ. ಇಂದು ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಉತ್ತರ ಆರಂಭ ದೊರೆತಿದೆ.
ರಾಜ್ಯದಲ್ಲಿ ಮತದಾನ ಚುರುಕಾಗಿ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶೇ. 8.02 ರಷ್ಟು ಮತದಾನ ಆಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಮಾಹಿತಿ ಮಾಹಿತಿ ನೀಡಿದೆ. ಅಂಕಿ-ಅಂಶಗಳನ್ನು ನೋಡಿದರೆ ಈ ಬಾರಿಯ ಮತದಾನಕ್ಕೆ ಉತ್ತಮ ಆರಂಭ ಸಿಕ್ಕಿದೆ.
ಬೆಂಗಳೂರು ಉತ್ತರದಲ್ಲಿ ಶೇ 7.55, ಬೆಂಗಳೂರು ದಕ್ಷಿಣದಲ್ಲಿ ಶೇ. 6.45, ಬೆಂಗಳೂರು ಕೇಂದ್ರ ಶೇ. 7.89, ಬೆಂಗಳೂರು ಗ್ರಾಮಾಂತರ ಶೇ. 7.72, ಬೆಂಗಳೂರು ನಗರ ಶೇ. 9.11 ರಷ್ಟು ಮತದಾನವಾಗಿದೆ.
ಕರ್ನಾಟಕ ವಿಧಾನಸಭೆಯು ಒಟ್ಟು 224 ಸದಸ್ಯ ಬಲವನ್ನು ಹೊಂದಿದ್ದು, ಸರ್ಕಾರ ರಚನೆ ಮಾಡಲು ಯಾವುದೇ ಪಕ್ಷಕ್ಕೆ 113 ಸದಸ್ಯರ ಬಲವುಳ್ಳ ಸ್ಪಷ್ಟ ಬಹುಮತ ಬೇಕಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ಯಾರು ಕರ್ನಾಟಕದ ಮುಂದಿನ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. (ದಿಗ್ವಿಜಯ ನ್ಯೂಸ್)