ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ (83) ಶನಿವಾರ ನಿಧನರಾಗಿದ್ದಾರೆ. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ; ಐವರು ಪೊಲೀಸ್ ಅಧಿಕಾರಿಗಳು ಮೃತ್ಯು!
ಪತ್ನಿ ತೆರೆಸಾ ಭಟ್ಟಾಚಾರ್ಯ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಡಿಸೆಂಬರ್ 5, 1940 ರಂದು ಜನಿಸಿದ ಬಿ.ಕೆ. ಭಟ್ಟಾಚಾರ್ಯ ಅವರು 2000ನೇ ಇಸ್ವಿಯ ಡಿಸೆಂಬರ್ 30ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು.
ಭಟ್ಟಾಚಾರ್ಯ ಅವರ ನಿಧನಕ್ಕೆ ಐಎಎಸ್ ಅಧಿಕಾರಿಗಳ ಸಂಘದ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಾಮಾಣಿಕ ಅಧಿಕಾರಿ: ಬಿ.ಕೆ. ಭಟ್ಟಾಚಾರ್ಯ ನಿಧನರಾಗಿರುವುದು ನನಗೆ ದುಃಖವಾಗಿದೆ. ಪ್ರಾಮಾಣಿಕ ಅಧಿಕಾರಿಯಾಗಿದ್ದ ಅವರೊಂದಿಗೆ ಕೆಲಸ ಮಾಡುವುದನ್ನು ಬಹಳ ಇಷ್ಟಪಟ್ಟಿದ್ದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.