ನ್ಯೂಸ್

ಗಣಪತಿ ಬಪ್ಪ ಮೋರಯ! ರಾಜ್ಯದಲ್ಲಿ ಷರತ್ತುಬದ್ಧ ಗಣೇಶೋತ್ಸವಕ್ಕೆ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕ್ಷೇತ್ರಗಳು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವುಳ್ಳ ಗಣೇಶೋತ್ಸವಗಳಿಗೆ ಅವಕಾಶ ನೀಡಬೇಕೆಂಬ ವಿವಿಧ ಸಂಘಟನೆಗಳ ಒತ್ತಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮನ್ನಣೆ ನೀಡಿದೆ.

ಕರೊನಾ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಗಣೇಶನ ಪ್ರತಿಷ್ಠಾಪನೆಗೆ ಸೀಮಿತ ಅವಕಾಶ ಅಂದರೆ ಮೂರು ದಿನಗಳು ಮಾತ್ರ ಖಾಲಿ ಜಾಗಗಳಲ್ಲಿ ಗಣಪತಿ ಕೂರಿಸಲು ಅವಕಾಶವಿರುತ್ತದೆ. ಆದರೆ ಜನಜಂಗುಳಿ ತಡೆಯುವ ನಿಟ್ಟಿನಲ್ಲಿ ಮನೋರಂಜನಾ ಕಾರ್ಯಕ್ರಮಕ್ಕೆ ಅವಕಾಶವಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ನಿಟ್ಟಿನಲ್ಲಿ ಯಾವ ರೀತಿ ಷರತ್ತುಗಳನ್ನು ವಿಧಿಸಲಾಗುವುದು ಎಂಬ ನಿಖರ ಮಾಹಿತಿಯು ಇಂದು ಸಂಜೆಯ ಒಳಗೆ ಅಧಿಕೃತವಾಗಿ ಸರ್ಕಾರದಿಂದ ಬಿಡುಗಡೆಯಾಗಲಿರುವ ಮಾರ್ಗಸೂಚಿಗಳಿಂದ ತಿಳಿಯಲಿದೆ ಎನ್ನಲಾಗಿದೆ.