ನ್ಯೂಸ್

ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಗೆ ಸಿದ್ಧತೆ

ಬೆಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಮರು ನಾಮಕರಣಗೊಳಿಸಲು ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ 2023ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ.

ಈ ಮಂಡಳಿಯ ವ್ಯಾಪ್ತಿಗೆ ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 21 ತಾಲೂಕುಗಳು ಸೇರಲಿವೆ. ಈ ಮೊದಲು ಈ ಎಲ್ಲ ತಾಲೂಕುಗಳು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಗೆ ಸೇರಿದ್ದವು. ಈಗ ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಧೇಯಕಕ್ಕೆ ಸಂಪುಟ ಅನುಮೋದನೆ ನೀಡಿದೆ.