ನ್ಯೂಸ್

ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ‌ಅರ್ಜಿ ವಜಾ; ಯಾವ ಕ್ಷಣದಲ್ಲಿ ಬೇಕಾದರೂ ಬಂಧನ ಸಾಧ್ಯತೆ!

ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ಆದರೆ ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಇಂದು ಹೈಕೋರ್ಟ್‌ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಅದೇಶ ಹೊರಡಿಸಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ಆದೇಶದ ಹಿನ್ನೆಲೆ ಮತ್ತೆ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದೆ. ಯಾವ ಕ್ಷಣದಲ್ಲಿ ಬೇಕಾದರು ಲೋಕಾಯುಕ್ತ ಪೊಲೀಸರಿಂದ ಮಾಡಾಳ್ ವಿರೂಪಾಕ್ಷಪ್ಪ ಬಂಧನವಾಗುವ ಸಾಧ್ಯತೆ ಇದೆ.

ಮಾಡಾಳ್ ಅವರನ್ನು ಬಂಧನ‌ ಮಾಡಿ ವಿಚಾರಣೆ ಮಾಡಬೇಕು‌ ಎಂದು ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಅಕ್ಷೇಪಣೆ ಸಲ್ಲಿಸಿ ಲೋಕಾಯುಕ್ತ ಪೊಲೀಸರು ಅಕ್ಷೇಪಣೆ ಸಲ್ಲಿಸಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಪೊಲೀಸರಿಂದ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಸಾಧ್ಯತೆ.