ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್(Karnataka Natak Academy website launched) ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲು ಈ ವೆಬ್ ಸೈಟ್ ಅನುಕೂಲವಾಗುತ್ತದೆ ಎಂದರು.
ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಹೇಳಿದರು.
ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದರು.
ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರ್ಕಾರ ಸಿದ್ದವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಡಾ.ಮರುಳಸಿದ್ದಪ್ಪ, ಡಾ.ಎಸ್.ಜಿ.ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.