ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ನಾಡಿನ ರೈತರಿಗೆ ಸಂತಸ ತಂದಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ದಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅರ್ಲಟ್ ಘೋಷಿಸಿದೆ.
ಮಲೆನಾಡಿನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಕೊಡಗಿನಲ್ಲಿ ಶುಕ್ರವಾರದಿಂದ ಮೂರು ದಿನ ಯೆಲ್ಲೋ ಅರ್ಲಟ್ ಇರಲಿದೆ. ಇದರಿಂದ ಸಹಜವಾಗಿಯೇ ಕರಾವಳಿಯಲ್ಲಿ ಬಿಸಿಲಿನ ವಾತಾವರಣ ಕಡಿಮೆಯಾಗುತ್ತಿದೆ.
ಉತ್ತರ ಒಳನಾಡು ಹಾಗೂ ದಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.