ಶಿವಮೊಗ್ಗ: ಕರ್ನಾಟಕ ಸಂಘದ ಈ ವರ್ಷದ ಜೀವಮಾನ ಸಾಧನೆ ಪ್ರಶಸ್ತಿ ಘೋಷಿಸಿದ್ದು, ಡಾ.ಚಂದ್ರಶೇಖರ ಪಾಟೀಲ ಹಾಗೂ ಡಾ.ಎಚ್.ಎಸ್.ರಾಘವೇಂದ್ರ ರಾವ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಾವ್ಯ ಕ್ಷೇತ್ರದ ಸಾಧನೆಗೆ ಡಾ.ಚಂದ್ರಶೇಖರ ಪಾಟೀಲ ಅವರಿಗೆ ದ.ರಾ.ಬೇಂದ್ರೆ ಪ್ರಶಸ್ತಿ, ವಿಮರ್ಶಾ ಕ್ಷೇತ್ರದ ಸಾಧನೆಗೆ ಡಾ.ಎಚ್.ಎಸ್.ರಾಘವೇಂದ್ರ ಅವರಿಗೆ ಪ್ರೊ. ತೀ.ನಂ. ಶ್ರೀಕಂಠಯ್ಯ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಪುರಸ್ಕಾರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ. ಎಚ್. ಎಸ್. ನಾಗಭೂಷಣ ತಿಳಿಸಿದ್ದಾರೆ.