ಬೆಂಗಳೂರು: ಚುನಾವಣೆಯಲ್ಲಿ ಬೆನ್ನಿಗೆ ನಿಂತ ಅಲ್ಪಸಂಖ್ಯಾತ ಸಮುದಾಯಕ್ಕೆ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಬಂಪರ್ ಗಿಫ್ಟ್ ನೀಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು ಸುಮಾರು 60 ಕೋಟಿ ಮೀಸಲಿಡಲಾಗಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಿದ ಕೊಡುಗೆ
*10 ಹೊಸ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳ ಆರಂಭ
*ಈಗಿನ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳ ಉನ್ನತಿಕರಣ
*ಮೌಲಾನಾ ಆಜಾದ್ ಶಾಲೆಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ
*ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಇಂಜಿನಿಯರಿಂಗ್, ವೈದ್ಯಕೀಯ ಕೊರ್ಸ್ಗೆ ಸಾಲ. ವ್ಯಾಸಂಗ ಮಾಡಲು 2% ಬಡಿ ದರದಲ್ಲಿ ಸಾಲ
*ಅಲ್ಪಸಂಖ್ಯಾತ ಯುವಕರಿಗೆ ಕೌಶಲ ತರಬೇತಿ
*ರಾಮನಗರ,ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೌಶಲ್ಯಭಿವೃದ್ದಿ ತರಬೇತಿಗೆ ನಾಲ್ಕು ಕೋಟಿ ಮೀಸಲು
*ಬೆಂಗಳೂರಿನ ಹಜ್ ಭವನದಲ್ಲಿ IAS/KAS ತರಬೇತಿ ಪ್ರಾರಂಭ
*ವಸತಿ ಸಹಿತ ತರಬೇತಿ ನೀಡಲು ನಿರ್ಧಾರ
*ಅಲ್ಪಸಂಖ್ಯಾತ 250ರ ವಿವಿ ರಾಂಕಿಂಗ್ ಪಡೆದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ಶೂನ್ಯ ಬಡ್ಡಿಯಲ್ಲಿ ಸಾಲ.