ಸಾಂದರ್ಭಿಕ ಚಿತ್ರ 
ನ್ಯೂಸ್

ರಾಜ್ಯದಲ್ಲಿಂದು ಒಮಿಕ್ರಾನ್ ಮಹಾಸ್ಫೋಟ; ಸೋಂಕಿತರ ಸಂಖ್ಯೆ 31 ಕ್ಕೇರಿಕೆ

theerthaswamy

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣದಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಹೊಸದಾಗಿ 12 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರು ಹಾಗೂ ಅವರ ಪ್ರಾಥಮಿಕ ಸಂಪರ್ಕಿತರಿಗೆ ಕೋವಿಡ್ ಒಮಿಕ್ರಾನ್ ತಳಿ ಹರಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನ ಪ್ರಕರಣ ಹಾಗೂ ಮೈಸೂರಿನ ಪ್ರಕರಣ ಇದೆ.

ಈ ಬಗ್ಗೆ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಸಚಿವ ಡಾ.ಸುಧಾಕರ್ ಟ್ವಿಟ್ಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.