ನ್ಯೂಸ್

ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನೈರುತ್ಯ ಮುಂಗಾರು ಚುರುಕುಗೊಂಡಿದೆ. ಎಂದಿನಂತೆ ಎಲ್ಲೆಲ್ಲಿ ಅಧಿಕ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ಇಂದಿನ ವರದಿಯಲ್ಲೂ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ.

ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಅನ್ನು ಘೋಷಣೆ ಮಾಡಿದೆ.