ನ್ಯೂಸ್

Karnataka Weather: ಬೆಂಗಳೂರಿನಲ್ಲಿ ಮತ್ತೆ ಮಳೆ ಸಾಧ್ಯತೆ! ದಟ್ಟ ಮಂಜು, ಮೈಕೊರೆವ ಚಳಿ..

Karnataka Weather:  ಮಳೆ ಕಡಿಮೆಯಾಗುತ್ತಿದ್ದಂತೆ ಇತ್ತ ಮೈಕೊರೆವ ಚಳಿ ಶುರುವಾಗಿದ್ದು ಮಾತ್ರವಲ್ಲದೆ ದಟ್ಟ ಮಂಜು ಕವಿದಿದೆ. ಡಿಸೆಂಬರ್ 19ರ ಬಳಿಕ ಮತ್ತೆ  ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್ ಭಾಗದ ಸಾಗದಲ್ಲಿ ಮತ್ತು ವಾಯುಭಾರ ಕುಸಿತುವಾಗಿರುವುದು ಕಂಡು ಬಂದಿದೆ. ಇದು ಸ್ಪಷ್ಟ ಚಂಡಮಾರುತ ಪರಿಚಲನೆಯಾಗಿದೆ. ಇದರಿಂದ ತಮಿಳುನಾಡು, ಚೆನ್ನೈ ಸೇರಿದಂತೆ ಕರ್ನಾಟಕದ ಬೆಂಗಳೂರು ಸೇರಿದಂತೆ ಒಂದಷ್ಟು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ ಇದೆ ಎಂದು IMD ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿಗಳು ಮತ್ತು ಮುಖ್ಯಸ್ಥರಾದ ಡಾ.ಎನ್.ಪುವಿಯರಸನ್ ಅವರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಸಧ್ಯ ಒಣಹವೆ ಇರಲಿದ್ದು,  ಮತ್ತೆ ಮಳೆಯಾಗುವ ಸಾಧ್ಯತೆ ಇದೆ.

ಚಳಿ ಈಗ ಶುರುವಾಗಿದೆ, ಮತ್ತೆ..ಮತ್ತೆ ಮಳೆಯೂ ಅಲ್ಲಲ್ಲಿ ಆಗುತ್ತಿದೆ. ಡಿಸೆಂಬರ್‌ 18ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.