ಬೆಳಗಾವಿ: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇಪದೆ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ತಿಳಿಸಿದರು.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಬೆಳಗಾವಿಯಲ್ಲಿ ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: ನನ್ನ ಸಿನಿಮಾ ಹಿಟ್ ಆದರೂ ಬೆಂಬಲ ಸಿಗುವುದಿಲ್ಲ; ಬಾಲಿವುಡ್ ಕರಾಳ ಸತ್ಯ ಬಿಚ್ಚಿಟ್ಟ ಸ್ಟಾರ್ ನಟ | Star Hero
ಹೋರಾಟಕ್ಕೆ ವಿರೋಧವಿಲ್ಲ
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು.