ನ್ಯೂಸ್

Karwar BJP Strike ಹಿಂದುಳಿದ ವರ್ಗದವರಿಗೆ ಸಿದ್ದರಾಮಯ್ಯ ಅನ್ಯಾಯ

Uttara Kannada - Subash Hegde

Karwar BJP Strike : ಹಿಂದುಳಿದ ವರ್ಗಗಳ ನಿಗಮಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಒಬಿಸಿ ಮೋರ್ಚಾ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು‌. ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಉಕ ಜಿಲ್ಲಾ ಹಿಂದುಳಿದ ಮೋರ್ಚಾ ಅಧ್ಯಕ್ಷ ರಾಜೇಂದ್ರ ನಾಯ್ಕ, ರಾಜ್ಯದಲ್ಲಿ ಶೇ. 58 ರಷ್ಟು ಹಿಂದುಳಿದ ವರ್ಗದವರಿದ್ದಾರೆ. ಪಂಚ ಗ್ಯಾರಂಟಿ ಮುಂದುವರಿಯಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ನಿಗಮಗಳಿಗೆ ಹಣ ನೀಡುವುದನ್ನು ಸರ್ಕಾರ ಬಂದ್ ಮಾಡಿದೆ.

ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗದವರನ್ನು ತುಳಿಯುತ್ತಿದೆ. ನಿಗಮಗಳಿಗೆ ಹಣ ಬಿಡುಗಡೆ ಮಾಡಿ, ಇಲ್ಲವೇ ಮುಚ್ಚಿ ಅಥವಾ ಸರ್ಕಾರ ದಿವಾಳಿಯಾಗಿದೆ ಎಂದು ಘೋಷಿಸಿ ಎಂದು ಸವಾಲು ಹಾಕಿದರು.

Karwar BJP Strike ನಲ್ಲಿ ಕುಬೇರಪ್ಪ

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಕುಬೇರಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅಧಿಕಾರ ಸ್ವರೂಪದಿಂದ ಅದೇ ಪಕ್ಷದ ಶಾಸಕರೇ ತಿರುಗಿ ಬಿದ್ದಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲ ನಿಗಮಗಳಿಗೆ ಕೇವಲ 390 ಕೋಟಿ ಮಾತ್ರ ಮೀಸಲಿಟ್ಟಿದ್ದಾರೆ., 25 ಸಾವಿರ ಕೋಟಿ ಎಸ್ ಸಿ ನಿಗಮದ ಹಣವನ್ನು ಪಂಚ ಗ್ಯಾರಂಟಿಗಳಿಗೆ ಡೈವರ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದುವರೆ ವರ್ಷದಲ್ಲಿ ಬೃಹತ್ ಹಗರಣಗಳನ್ನು ಮಾಡಿದೆ. ಸದನದ ಒಳಗೆ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಸದನದ ಹೊರಗೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.

ಬುಜೆಪಿ ಪ್ರಮುಖರಾದ ನಾಗರಾಜ ನಾಯಕ ಮಾತನಾಡಿ, ಸಿದ್ದರಾಮಯ್ಯ ಅವರು, ಹಿಂದುಳಿದ ವರ್ಗಗಳ ವಿಕ್ಟಿಮ್ ಕಾರ್ಡ್ ಪ್ಲೇ ಮಾಡಿ, ನಂತರ ಹಿಂದುಳಿದ ವರ್ಗದವರಿಗೇ ಶತ್ರುವಾಗಿ, ಭಸ್ಮಾಸುರನಾದವ ಸಿದ್ದರಾಮಯ್ಯ ಎಂದು ಆರೋಪಿಸಿದರು.

Karwar BJP Strike ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ಪ್ರಧಾನ ಕಾರ್ಯದರ್ಶಿ, ಗುರುಪ್ರಸಾದ ಹೆಗಡೆ, ಜಿಲ್ಲಾ ವಕ್ತಾರ ಸದಾನಂದ ಭಟ್, ಪ್ರಶಾಂತ ನಾಯ್ಕ, ಸುನೀಲ ಸೋನಿ, ನಾಗೇಶ ಕುರ್ಡೇಕರ್, ಸುಭಾಷ ಗುನಗಿ, ಮನೋಜ ಭಟ್, ಸಂಜಯ ಸಾಳುಂಕೆ, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಸ್ಥಾಯಿ ಸಮಿತಿ ಚೇರ್ಮನ್ ಮಾಲಾ ಹುಲಸ್ವಾರ, ಸದಸ್ಯರಾ ರೇಷ್ಮಾ ಮಾಳ್ಸೇಕರ್ ಇತರರು ಇದ್ದರು‌.