ನ್ಯೂಸ್

ಕೆಎಎಸ್ ಮುಖ್ಯ ಪರೀಕ್ಷೆ: 24 ಮಂದಿಗೆ ಆಫ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಮೇ 3,5,7 ಮತ್ತು 9ರಂದು ನಡೆಯಲಿರುವ ಕೆಎಎಸ್ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ http://kpsc.kar.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದೆ.

34 ಮಂದಿಗೆ ಅರ್ಜಿ ಸಲ್ಲಿಸಲು ಅನುಮತಿ

ಹೈಕೋರ್ಟ್ ಮಧ್ಯಂತರ ಆದೇಶದಲ್ಲಿನ ತೀರ್ಪಿನಂತೆ ಮುಖ್ಯ ಪರೀಕ್ಷೆಗೆ ಅರ್ಹರಾಗಿರುವ 34 ಮಂದಿಗೆ ಆಫ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ ಅವಕಾಶ ನೀಡಿದೆ.

34 ಅಭ್ಯರ್ಥಿಗಳ ಹೆಸರುಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಂತಹವರು ದಾಖಲೆಗಳೊಂದಿಗೆ ಏ.28ರ ಸಂಜೆ 5 ಗಂಟೆಯೊಳಗೆ ಆಯೋಗದ ಕೇಂದ್ರ ಕಚೇರಿಗೆ ಅಂಚೆ ಮೂಲಕ ಸಲ್ಲಿಸಬಹುದು.