ನ್ಯೂಸ್

ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜ.22 ಕೊನೇ ದಿನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಡಿ.29ರಂದು ನಡೆಸಿದ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯ ಕೀ ಉತ್ತರಗಳನ್ನು ಬುಧವಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು "ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಜ.22ರ ಸಂಜೆ 5-30 ರೊಳಗಾಗಿ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಕಳುಹಿಸಬೇಕು. ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ಬಿಳಂಬವಾದಲ್ಲಿ ಪರಿಗಣಿಸುವುದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ತಿಳಿಸಿದ್ದಾರೆ.

2013-24ನೇ ಸಾಲಿನ ಗೆಜೆಟೆಡ್ ಪ್ತೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಪೂರ್ವಭಾವಿ ಮರು ಪರೀಕ್ಷೆಯನ್ನು ಡಿ.29ರಂದು ನಡೆಸಲಾಗಿತ್ತು. 2..10 ಲಕ್ಷ ಮಂದಿ ನೋಂದಣಿ ಮಾಡಿಕೊಂಡು ಶೇ.48 ಅಭ್ಯರ್ಥಿಗಳು ಮಾತ್ರ ನೋಂದಣಿ ಮಾಡಿಜೊಂಡಿದ್ದರು.

ಷರತ್ತುಗಳು

  • - ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಆಯೋಗದ ಜಾಲತಾಣದಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ (ಕನ್ನಡ ಅಥವಾ ಇಂಗ್ಲೀಷ್) ಸಲ್ಲಿಸಬೇಕು.
  • - ಆಕ್ಷೇಪಣೆಗಳನ್ನು ಸಲ್ಲಿಸುವ ಪ್ರತಿ ಪ್ರಶ್ನೆಗೆ 50 ರೂ.ನಂತೆ ಶುಲ್ಕವನ್ನು (ಐ.ಪಿ.ಸಿ ಅಥವಾ ಡಿ.ಡಿ. ಮೂಲಕ) ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು ಇವರ ಹೆಸರಿಗೆ ಸಂದಾಯ ಮಾಡಬೇಕು.
  • - ಶುಲ್ಕ ಸಂದಾಯ ಮಾಡದ ಆಕ್ಷೇಪಣಾ ಅರ್ಜಿಗಳನ್ನು ತಿರಸ್ಕರಿಸಲಾಗುತ್ತು
  • - ಪ್ರತಿ ಪ್ರಶ್ನೆಯ ಕೀ ಉತ್ತರಕ್ಕೆ ಸಲ್ಲಿಸುವ ಆಕ್ಷೇಪಣೆಗಳಿಗೆ ಪೂರಕವಾಗಿ ಸಲ್ಲಿಸುವ ದಾಖಲೆಗಳಿಗೆ ಸಂಬಂಧಿಸಿದಂತೆ ಲೇಖಕರ ಹೆಸರು, ಪ್ರಕಾಶನದ ಪ್ರತಿ ಇತ್ಯಾದಿ ವಿವರಗಳನ್ನು ಆಕ್ಷೇಪಣೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನಮೂದಿಸತಕ್ಕದ್ದು,
  • - ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು.
  • - ದಾಖಲೆಗಳ ಪ್ರತಿ ಮಟದ ಮೇಲೆ ಪ್ರಶ್ನೆ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯತಕ್ಕದ್ದು.
  • - ಆಕ್ಷೇಪಣೆಯೊಂದಿಗೆ ಅಭ್ಯರ್ಥಿಯು ದೃಢೀಕರಿಸಿದ ಪ್ರವೇಶ ಪತ್ರದ ಪ್ರತಿಯನ್ನು ಪರಿಶೀಲನೆಗಾಗಿ ಲಗತ್ತಿಸಬೇಕು