ಹಾವೇರಿ: ಜಿಲ್ಲೆಯ ಹಿರೇಕೆರೂರಿನಲ್ಲಿ ಡಿ. 28 ಹಾಗೂ 29ರಂದು ನಡೆಯಲಿರುವ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬ್ಯಾಡಗಿಯ ಮಹಿಳಾ ಸಾಹಿತಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸತೆ ಸಂಕಮ್ಮ ಸಂಕಣ್ಣನವರ ಆಯ್ಕೆಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.