KD Movie; ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದಿಂದ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಕೆಡಿ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿರುವ ಸುದ್ದಿಯನ್ನು ಸ್ವತಃ ಚಿತ್ರತಂಡ ಹೊರಹಾಕಿದ್ದು, ಶೀಘ್ರದಲ್ಲೇ ತೆರೆಗೆ ಬರ್ತೀವಿ ಎಂದು ಹೇಳಿದೆ.
ಈ ಬಗ್ಗೆ ಶೂಟಿಂಗ್ ಸೆಟ್ ಸ್ಥಳದಿಂದ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಟ ಧ್ರುವ ಸರ್ಜಾ ತಮ್ಮ ಇಡೀ ಟೀಂ ಜೊತೆಗೂಡಿ ವಿಡಿಯೋ ಮೂಲಕ ಶೂಟಿಂಗ್ ಮುಕ್ತಾಯಗೊಂಡಿದೆ ಎಂದು ಹೇಳಿದ್ದಾರೆ. ಇನ್ನೂ ಈ ವಿಡಿಯೋವನ್ನು ಜೋಗಿ ಪ್ರೇಮ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೆಡಿ ಸಿನಿಮಾದಲ್ಲಿ ನಟ ಕಿಚ್ಚ ಸುದೀಪ್ ಕೂಡ ಇದ್ದಾರಾ ಎಂಬ ಅಭಿಮಾನಿಗಳ ಪ್ರಶ್ನೆಗೆ ನಿನ್ನೆ ಉತ್ತರ ಸಿಕ್ಕಿದೆ. ಹೈದರಾಬಾದ್ನಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಸ್ಥಳದಿಂದ, ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ.
(ಏಜೆನ್ಸೀಸ್)
ಜೋಗಿ ಪ್ರೇಮ್ ನಿರ್ದೇಶನ ಮಾಡಿರೋ ಕೆಡಿ ಸಿನಿಮಾದಲ್ಲಿ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಹಾಗೂ ರವಿಚಂದ್ರನ್ ಬಣ್ಣ ಹಚ್ಚಿದ್ದಾರೆ. ಇನ್ನೂ ಇಂತಹ ಮಹಾನ್ ನಟರ ಜೊತೆ ಬಾದ್ಷಾ ಕಿಚ್ಚ ಸುದೀಪ್ ಕೂಡ ಇರಲಿದ್ದಾರೆ ಎಂಬ ವಿಚಾರವನ್ನು ಸ್ವತಃ ಜೋಗಿ ಪ್ರೇಮ್ ಅವರೇ ಹಂಚಿಕೊಂಡಿದ್ದಾರೆ. ಇನ್ನೂ ಧ್ರುವ ಸರ್ಜಾ, ಕಿಚ್ಚ ಸುದೀಪ್ ಹಾಗೂ ಪ್ರೇಮ್ ಜೊತೆಗಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ.