ನ್ಯೂಸ್

ಕೆಂಪೇಗೌಡರ ಕೋಟೆ ಅಭಿವೃದ್ಧಿ

ಶ್ರೀಕಾಂತ್ ಶೇಷಾದ್ರಿ

ಬೆಂಗಳೂರು: ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಮಾಗಡಿ ಕೋಟೆಯನ್ನು ಅಭಿವೃದ್ಧಿಪಡಿಸುವ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪೇಗೌಡರ ಬಗ್ಗೆ ಮಾಹಿತಿಯೂ ಸಿಗಬೇಕು ಹಾಗೂ ಪ್ರವಾಸಿ ಸ್ಥಳವಾಗಿಯೂ ಪರಿವರ್ತನೆಯಾಗಬೇಕು. ಸಚಿವರಾದ ಕೆ.ಎಚ್.ಮುನಿಯಪ್ಪ ಅವರ ಕ್ಷೇತ್ರದಲ್ಲಿ ಕೆಂಪೇಗೌಡರ ಜನ್ಮಸ್ಥಳ ಅಭಿವೃದ್ದಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಜಯಂತಿಯಂದೇ ಗುದ್ದಲಿಪೂಜೆಗೆ ಯೋಜಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.