ಬೆಂಗಳೂರು: ಹಿಂದಿನ ಸರ್ಕಾರ ಕೆಂಪೇಗೌಡರನ್ನು ಬಿಸಿಲಲ್ಲಿ ನಿಲ್ಲಿಸಿ ಹೋಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದರು.
ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿತ್ತು. ಅದರ ಅಕ್ಕಪಕ್ಕ ಒಂದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ತರಾತುರಿಯಲ್ಲಿ ಪ್ರಧಾನಮಂತ್ರಿಗಳನ್ನು ಕರೆಸಿ ಕೆಂಪೇಗೌಡರ ಪ್ರತಿಮೆಯನ್ನು ಬಿಸಿಲಿನಲ್ಲಿ ನಿಲ್ಲಿಸಲಾಗಿದೆ ಎಂದು ಎಂದು ಹೇಳಿದರು.
ಈ ಯೋಜನೆಯ ಉಸ್ತುವಾರಿಯನ್ನು ಸಚಿವರಾದ ಮುನಿಯಪ್ಪ ಅವರು ಹಾಗೂ ಕೃಷ್ಣಭೈರೇಗೌಡರು ತೆಗೆದುಕೊಳ್ಳಲಿದ್ದಾರೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.