ನ್ಯೂಸ್

ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ

ತಿರುವನಂತಪುರಂ: ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಕಲಮಸ್ಸೆರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿ ಭಾನುವಾರ ತಡರತಾ್ರಿ ಚಿಕಿತ್ಸೆ ಫಲಕಅರಿಯಾಗದೆ ಮೃತಪಟ್ಟಿರುವುದಾಗಿ ಕೇರಳ ಸರ್ಕಾರದ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ದುರಂತದ ಪ್ರಮುಖ ರೂವಾರಿ ಪೊಲೀಸರಿಗೆ ಶರಣಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.