ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಗುರುವಾರ ಕರೊನಾ ವೈರಸ್ ಸೋಂಕು ದೃಢಪಟ್ಟಿದೆ.
75 ವರ್ಷದ ವಿಜಯನ್ ಅವರು ಕೊಯಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರ ಮಗಳು ವೀಣಾ ಅವರಿಗೆ ಏಪ್ರಿಲ್ 6 ರಂದು ಕರೊನಾ ಸೋಂಕು ತಗುಲಿತ್ತು. ಇವರ ಸಂಪರ್ಕದಲ್ಲಿ ಬಂದಿದ್ದ ವಿಜಯನ್ ಅವರಿಗೂ ತಪಾಸಣೆ ಮಾಡಿದಾಗ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿಶೇಷವೆಂದರೆ ಕಳೆದ ತಿಂಗಳು 3 ರಂದು ವಿಜಯನ್ ಅವರು ಕರೊನಾ ಲಸಿಕೆ ಪಡೆದಿದ್ದರು.
ಕೇರಳದಲ್ಲಿ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಲಸಿಕೆ ಹಾಕಲಾಗುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.