BBK 12 : ಬಿಗ್‌ಬಾಸ್ ಕನ್ನಡ ಶೋ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ಇದು ಕಿರುತೆರೆ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಆಗಿ ಹೊರಹೊಮ್ಮಿದೆ. ವಿವಾದಗಳಿಂದಲೇ ಸಿಕ್ಕಾಪಟ್ಟೆ ಸದ್ದು ಮಾಡುವ ಈ ಶೋ ಭಾರಿ ಜನಪ್ರಿಯತೆ ಸಹ ಪಡೆದುಕೊಂಡಿದೆ. ಈ ಶೋ ಆರಂಭವಾದ್ರೆ ಟಿಆರ್ಪಿಯಲ್ಲಿ ದಾಖಲೆಗಳನ್ನೇ ಬರೆಯುತ್ತೆ. ಅಷ್ಟರಮಟ್ಟಿಗೆ ಈ ಶೋ ಮನೆ ಮಾತಾಗಿದೆ.
ಇದನ್ನೂ ಓದಿ: RBI Governor| ಭಾರತ ಶೀಘ್ರದಲ್ಲೇ ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದ ಆರ್ಬಿಐ ಗವರ್ನರ್ ಮಲ್ಹೋತ್ರಾ
ಇಂದು (ಆ.31) ಮೈಸೂರಿನಲ್ಲಿ ರಾಜಕಾರಣಿ ಹಾಗೂ ಉದ್ಯಮಿ ಆಗಿರುವ ಸಂದೇಶ್ ನಾಗರಾಜ್ ರವರ ಹುಟ್ಟುಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯರನ್ನು ಸೇರಿದಂತೆ ಅನೇಕ ಗಣ್ಯರು ಆಗಮಿಸಿದ್ದರು. ಇನ್ನೂ ಈ ಕಾರ್ಯಕ್ರಮಕ್ಕೆ ಸುದೀಪ್ ಕೂಡ ಆಗಮಿಸಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಕಿಚ್ಚ, ನಾನು ಶೀಘ್ರದಲ್ಲೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ. ನೀವೆಲ್ಲರೂ ಸಹ ಆಶೀರ್ವಾದ ಮಾಡಿ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಬಿಗ್‌ಬಾಸ್ ಆರಂಭದ ದಿನಾಂಕವನ್ನು ಕೇಳಿದ ತಕ್ಷಣ ಅಭಿಮಾನಿಗಳಲ್ಲಿ ಸಂಭ್ರಮ ಜೋರಾಗಿದೆ.
ಇನ್ನೂ ಹಿಂದಿ, ಮಲಯಾಳಂನಲ್ಲಿ ಈಗಾಗಲೇ ಶೋ ಆರಂಭವಾಗಿದ್ದು, ಕನ್ನಡ ಬಿಗ್‌ಬಾಸ್ ಕಾರ್ಯಕ್ರಮದ 12 ನೇ ಸೀಸನ್ ಯಾವಾಗ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಆಯೋಜಕರು ಬಿಗ್ ಬಾಸ್ ಕನ್ನಡ 12ರ ಲೋಗೋವನ್ನು ಬಿಡುಗಡೆ ಮಾಡಿದ್ದರು. ಈ ಬೆನ್ನಲ್ಲೇ ಈ ಕಾರ್ಯಕ್ರಮದ ನಂದಾದೀಪವಾಗಿರುವ ನಟ ಕಿಚ್ಚ ಸುದೀಪ್ ಅವರು ಬಿಗ್‌ಬಾಸ್ 12 ಆರಂಭದ ದಿನಾಂಕವನ್ನು ರಿವೀಲ್ ಮಾಡಿದ್ದಾರೆ.
(ಏಜೆನ್ಸೀಸ್)
ಈಗಾಗಲೇ ಯಶಸ್ವಿ 11 ಆವೃತ್ತಿಯನ್ನು ಯಶಸ್ವಿಯಾಗಿ ಮುಗಿಸಿರುವ ಬಿಗ್‌ಬಾಸ್ ಶೋ 12ನೇ ಆವೃತ್ತಿಗೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಭರಪೂರ ಮನರಂಜನೆಯ ಜೊತೆಗೆ ವಿವಾದಗಳನ್ನು ಹುಟ್ಟು ಹಾಕುವ ಬಿಗ್‌ಬಾಸ್, ಕಿರುತೆರೆ ಲೋಕದ ಜನಪ್ರಿಯ ಶೋಗಳಲ್ಲಿ ಒಂದೆಂದರೆ ತಪ್ಪಾಗಲಾರದು. ಪ್ರೀತಿ, ಸ್ನೇಹ ಸಂಬಂಧಗಳಿಗೆ ಈ ಶೋ ಬೆಸುಗೆಯಾಗುತ್ತದೆ. ಇಲ್ಲಿ ನಗು, ಕಣ್ಣೀರು, ಕೋಪ, ಮುನಿಸು ಮತ್ತು ಮನಸ್ತಾಪಗಳ ಮಿಶ್ರಣವು ಇದೆ. ಟಾಸ್ಕ್ ನೀಡುವುದರ ಜೊತೆಗೆ ಜೀವನದ ಪಾಠವನ್ನು ಹೇಳಲಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ವಾರದ ಕೊನೆಯಲ್ಲಿ ಬಾದ್ಶಾ ಕಿಚ್ಚ ಸುದೀಪರ ಪಂಚಾಯಿತಿಯಲ್ಲಿ ಸರಿ-ತಪ್ಪುಗಳ ತಿದ್ದುವಿಕೆ ಶೋಗೆ ಹೊಸ ಆಯಾಮವನ್ನು ತಂದುಕೊಡುತ್ತದೆ. ಈ ಎಲ್ಲ ಕಾರಣಗಳಿಂದ ಈ ಶೋ ವಿಶೇಷ ಎನಿಸಿಕೊಂಡಿದ್ದು, ಕಿರುತೆರೆ ಲೋಕದಲ್ಲಿ ಸಿಕ್ಕಾಪಟ್ಟೆ ಜನಪ್ರಿಯ ಪಡೆದುಕೊಂಡಿದೆ. ಈ ಶೋ ಮಾಮೂಲಿಯಂತೆ ಈ ಬಾರಿಯೂ ಕಲರ್ಸ್ ಕನ್ನಡದಲ್ಲಿ ಮೂಡಿ ಬರಲಿದೆ.