ಬೆಂಗಳೂರು: ಇಲ್ಲಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿ (ಕಾಂಗ್ರೆಸ್ ಭವನ) ಕಟ್ಟಡ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಬಯಸಿದೆ.
ಇದಕ್ಕಾಗಿ ಬೆಂಗಳೂರು ರೇಸ್‌ಕೋರ್ಸ್ ರಸ್ತೆ ಕಾಂಗ್ರೆಸ್ ಕಟ್ಟಡ ನಿರ್ಮಾಣ ಸಮಿತಿ ರಚಿಸಿದ್ದು, ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಸಚಿವರಾದ ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಸೇರಿ 8 ಮಂದಿ ಸದಸ್ಯರನ್ನು ನೇಮಿಸಲಾಗಿದೆ.