ನ್ಯೂಸ್

ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂಪಾಯಿ ಹೆಚ್ಚಳ: ಕೆಎಂಎಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್​ಗೆ 3 ರೂಪಾಯಿ ಹೆಚ್ಚಿಸಲು ಸಿದ್ಧತೆ ನಡೆಯುತ್ತಿದ್ದು, ಹೆಚ್ಚಳ ದರವು ರೈತರಿಗೆ ಸಂಪೂರ್ಣವಾಗಿ ಸಿಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ರಾಜ್ಯದ 16 ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ. ಬೆಲೆ ಏರಿಕೆ ಅನಿವಾರ್ಯವಾಗಿದೆ. ದರ ಏರಿಕೆ ಬಗ್ಗೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುತ್ತೆ ಎಂದರು.